ಮೈಸೂರು: ಈಜಲು ಹೋದ ಮೂವರು ಯುವಕರು ನೀರು ಪಾಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯ ಸೇತುವೆಯಲ್ಲಿ ನಡೆದಿದೆ.
ಬಿಹಾರ ಮೂಲದ 22 ವರ್ಷದ ಮಿಲನ್, 25 ವರ್ಷದ ಮೋಹನ್, 19 ವರ್ಷದ ತರುಣ್ ಮೃತ ದುರ್ದೈವಿಗಳು. ಮಿಲನ್ ಅವರ ಮೃತ ದೇಹ ಪತ್ತೆಯಾಗಿದೆ. ಇನ್ನುಳಿದ ಇಬ್ಬರು ಯುವಕರ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಗುತ್ತಿಗೆ ಆಧಾರದ ಮೇಲೆ ನೆಸ್ಲೆ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಈಜಲು ಹೋದ ಮೂವರು ಸುಳಿಗೆ ಸಿಲುಕಿದ್ದಾರೆ.
ಸ್ಥಳೀಯರು ನಂಜನಗೂಡು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಪಿಲಾ ನದಿಯಲ್ಲಿ ಶವಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.