ಸರಗೂರು: ಹುಲಿ ದಾಳಿ ಪ್ರಕರಣ ಹಿನ್ನಲೆ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆ ವಾಹನದ ಮೇಲೆ ಕಲ್ಲು ತೂರಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಡಿಯಾಲ ಅರಣ್ಯ ಇಲಾಖೆಗೆ ಸೇರಿದ ಎರಡು ವಾಹನಗಳ ಗಾಜು ಪುಡಿ ಪುಡಿಯಾಗಿವೆ.

ಘಟನೆ ನಡೆದ ಸ್ಥಳಕ್ಕೆ ಜೀಪ್ ನಲ್ಲಿ ಅಧಿಕಾರಿಗಳು ಬಂದಾಗ ವಾಹನಗಳ ಮೇಲೆ ಗ್ರಾಮಸ್ಥರು ಸಿಟ್ಟು ತೋರಿಸಿದ್ದಾರೆ. ನಿನ್ನೆ ಹುಲಿ ಸೆರೆಗೆ ಕೂಂಬಿಂಗ್ ಆಪರೇಷನ್ ನಡೆಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಸಿದ್ದತೆ ನಡೆಸುತ್ತಿದ್ದ ವೇಳೆ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ಮಹದೇವ್ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ.

ದಾಳಿಯಿಂದ ಮಹದೇವ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಯಿಂದಾಗಿ ಘಟನೆ ನಡೆದಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ಜೀಪ್ ಮೇಲೆ ತಮ್ಮ ಆಕ್ರೋಶ ಪ್ರದರ್ಶಿಸಿದ್ದಾರೆ.