ಹುಣಸೂರು: ಮೈಸೂರು ಜಿಲ್ಲೆಯಲ್ಲಿ ಹುಲಿ ಹಾವಳಿ ಗ್ರಾಮಸ್ಥರ ನಿದ್ರೆ ಕೆಡಿಸಿದೆ. ಹಸು ಮೇಲೆ ಹುಲಿ ದಾಳಿ ನಡೆಸಿದ ಹಿನ್ನಲೆ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಣಸೂರು ತಾಲೂಕಿನ ಗುರುಪುರ ಬಳಿಯ ಹೊಸೂರು ಗೇಟ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಗೌಡನ ಕಟ್ಟೆ ಬಳಿ ಮೇಯಲು ಬಿಟ್ಟಿದ್ದ ಹಸು ಮೇಲೆ ಹುಲಿ ದಾಳಿ ನಡೆಸಿದೆ. ಮಾಹಿತಿ ನೀಡಿದರೂ ಅರಣ್ಯಾಧಿಕಾರಿಗಳು ಬಂದಿಲ್ಲ.
ಈ ಹಿನ್ನಲೆ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ್ದಾರೆ. ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

