ಮೈಸೂರು: ಗೋಬರ್ ಗ್ಯಾಸ್ ಬಾವಿಗೆ ಬಿದ್ದಿದ್ದ ಹುಲಿಯನ್ನ ರಕ್ಷಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬಿಡುಗಲು ಗ್ರಾಮದಲ್ಲಿ ಹುಲಿ ರಕ್ಷಣೆಯಾಗಿದೆ.
ಗ್ರಾಮದ ನವೀನ್ ಎಂಬುವವರ ಹಳೆಯ ಗೋಬರ್ ಗ್ಯಾಸ್ ಬಾವಿಯಲ್ಲಿ ಬಿದ್ದಿತ್ತು. ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಗೆ ಅರವಳಿಕೆ ಮದ್ದು ನೀಡಿ ರಕ್ಷಿಸಿದ್ದಾರೆ.
ಆರೋಗ್ಯವಾಗಿರುವ 6 ತಿಂಗಳ ಗಂಡು ಹುಲಿಯನ್ನ ಮೈಸೂರಿನ ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿದೆ. ವಿಶೇಷ ಹುಲಿ ಸಂರಕ್ಷಣಾ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಯಶಸ್ವಿ ಕಾರ್ಯಾಚರಣೆ ನಡೆದಿದೆ.

