ಮೈಸೂರು: ನಂಜನಗೂಡು ತಾಲ್ಲೂಕಿನ ಚಿನ್ನದಗುಡಿಹುಂಡಿ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ನಂಜನಗೂಡು ಮತ್ತು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಚಿನ್ನದ ಗುಡಿಹುಂಡಿ ಗ್ರಾಮದ ರೈಲ್ವೆ ನಿಲ್ದಾಣದಿಂದ ಶ್ರೀ ಶನೇಶ್ವರ ಸ್ವಾಮಿ ದೇವಾಲಯದ ಬಳಿ ಇರುವ ಬೆಳೆಗಿನ ಸಮಯದಲ್ಲಿ ಪೊದೆಯೊಳಗೆ ರಸ್ತೆಯನ್ನು ದಾಟಿ ಹುಲಿ ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ವಾಹನ ಸವಾರರು ಮತ್ತು ಗ್ರಾಮಸ್ಥರು ಹೆಚ್ಚಾಗಿ ಸಂಚರಿಸುತ್ತಿದ್ದಾರೆ ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ದಾಳಿ ಆಗುವ ಸಾಧ್ಯತೆ ಇದೆ. ಇತ್ತೀಚೆಗೆ ಜಾನುವಾರಗಳ ಮೇಲೆ ಚಿರತೆಯೋ ಅಥವಾ ಹುಲಿಯೋ ದಾಳಿ ನಡೆಸಿ ತಿಂದು ಹಾಕಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟು ಚಿರತೆ ಮತ್ತು ಹುಲಿಯನ್ನು ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

