ಮೈಸೂರು: ರೈತನ ಮೇಲೆ ದಾಳಿ ಮಾಡಿದ್ದ ಹುಲಿ ಸರಗೂರು ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಸೆರೆಯಾಗಿದೆ. ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸೆರೆಯಾಗಿದ್ದು, ಸಾಕಾನೆಗಳ ಸಹಾಯದಿಂದ ಅರವಳಿಕೆ ಮದ್ದು ನೀಡಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದರು.
ಹುಲಿ ಸೆರೆ ಕಾರ್ಯಾಚರಣೆ ವೇಳೆ ರೈತನ ಮೇಲೆ ವ್ಯಾಘ್ರ ದಾಳಿ ಮಾಡಿತ್ತು. ನೆನ್ನೆಯಿಂದ ಮತ್ತೆ ಹುಲಿ ಸೆರೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯವರು ನಡೆಸಿದ್ದರು. ಇಂದು ಹುಲಿ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಹುಲಿ ಸೆರೆಯಿಂದ ಗ್ರಾಮಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ.

