ನಂಜನಗೂಡು: ಮೇ.28 ರಂದು ನಂಜನಗೂಡಿನಲ್ಲಿ ಬಿಜೆಪಿ ಪಕ್ಷದ ವತಿಯಿಂದ ತಿರಂಗಾ ಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಹೇಳಿದರು.

ನಗರದ ಬಿಜೆಪಿ ಪಕ್ಷದ ಕಛೇರಿಯಲ್ಲಿ ಮಾಜಿ ಶಾಸಕ ಬಿ.ಹರ್ಷವರ್ಧನ್ ನೈತೃತ್ವದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಮಾಜಿ ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿದರು.

ಪ್ರವಾಸಿಗರನ್ನು ಪಾಕಿಸ್ತಾನದ ಉಗ್ರರು ಧಾರುಣ್ಯವಾಗಿ ಹತ್ಯ ಮಾಡಿದರು ಈ ದಾಳಿಯ ಪ್ರತೀಕವಾಗಿ ಕೇಂದ್ರ ಸರ್ಕಾರವು ಅಪರೇಷನ್ ಸಿಂಧೂರ ಮುಖಾಂತರ ಪಾಕಿಸ್ತಾನದ ಉಗ್ರರಿಗೆ ತಕ್ಕ ಪಾಠ ಕಲಿಸಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಮೇ.28 ರಂದು ಬುಧವಾರ ನಂಜನಗೂಡಿನಲ್ಲಿ ಬೃಹತ್ ತಿರಂಗ ಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪಕ್ಷಾತೀತವಾಗಿ ಕಾರ್ಯಕ್ರಮ ನಡೆಯಲಿದ್ದು, ಬಿಜೆಪಿಯ ಎಲ್ಲಾ ಮೋರ್ಚಗಳು ಭಾಗವಹಿಸುವವರು. ತಾಲ್ಲೂಕಿನ ಎಲ್ಲಾ ಸಂಘ ಸಂಸ್ಥೆಗಳ ಮುಖಂಡರುಗಳು, ರೈತ ಸಂಘಟನೆಯ ಮುಖಂಡರುಗಳು ಭಾಗವಹಿಸಬೇಕೆಂದು ಮನವಿ ಮಾಡಿದರು.

ಈ ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಕೆಂಡಗಣ್ಣಪ್ಪ , ಮಾಜಿ ಜಿಪಂ ಸದಸ್ಯ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಿಕ್ಕರಂಗನಾಯಕ, ಬಿಜೆಪಿ ಕಾರ್ಯಕಾರಿಣಿ ಸಮಿತಿಯ ಸದಸ್ಯ ಹೆಮ್ಮರಗಾಲ ಸೋಮಣ್ಣ, ನಗರಾಧ್ಯಕ್ಷ ಸಿದ್ದರಾಜು, ಮಾಜಿ ನಗರಸಭಾ ಅಧ್ಯಕ್ಷ ಮಹದೇವಸ್ವಾಮಿ, ಬಿಜೆಪಿ ಮುಖಂಡರಾದ ಕೃಷ್ಣಪ್ಪ, ಮಂಡ್ಯ ಮಹದೇವ್, ರಾಮು ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಜರಿದ್ದರು.