News Karnataka Kannada
Wednesday, May 08 2024
ಮೈಸೂರು

ಮತಚಲಾಯಿಸಿ ಮನೆಗೆ ತೆರಳುತ್ತಿದ್ದ ಪಾದಚಾರಿಗೆ‌ ಬೈಕ್ ಡಿಕ್ಕಿ; ಸ್ಥಳದಲ್ಲಿಯೇ ಸಾವು

ಮತ ಚಲಾಯಿಸಿ ಮನೆಗೆ ತೆರಳುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಪಾದಚಾರಿ ಮತ್ತು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ತಾಂಡವಪುರ ಗ್ರಾಮದಲ್ಲಿ ನಡೆದಿದೆ.
Photo Credit : NewsKarnataka

ನಂಜನಗೂಡು: ಮತ ಚಲಾಯಿಸಿ ಮನೆಗೆ ತೆರಳುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಪಾದಚಾರಿ ಮತ್ತು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ತಾಂಡವಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ 40 ವರ್ಷದ ಶಿವಣ್ಣ, ಮತ್ತು 19 ವರ್ಷದ ಮಿಥುನ್ ಮೃತ ದುರ್ಧೈವಿಗಳು. ಬೈಕ್ ಸವಾರ ತನ್ನ ಸ್ನೇಹಿತನೊಂದಿಗೆ ಚಾಮರಾಜನಗರ ತಾಲ್ಲೂಕಿನ ಗಾಳಿಪುರ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ತಾಂಡವಪುರ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ವ್ಯಕ್ತಿಗೆ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವ್ಯಕ್ತಿ ಶಿವಣ್ಣ ಮತ್ತು ಬೈಕ್ ಸವಾರ ಮಿಥುನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹಿಂಬದಿ ಸವಾರ ಅನಿಲ್ ಪಟೇಲ್ ಗೆ ಗಂಭೀರ ಗಾಯಗಳಾಗಿವೆ.

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡಿನ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟಿರುವ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು