ಮೈಸೂರು: ಯುಗಾದಿ ಸಂಭ್ರಮದಲ್ಲಿ ಇಸ್ಪೀಟ್ ಆಟಕ್ಕೆ ಬನ್ನೂರು ಪೊಲೀಸರು ಬ್ರೇಕ್ ಹಾಕಿದ್ದಾರೆ. ಯುಗಾದಿ ಹಿಂದಿನ ದಿನ,ಯುಗಾದಿ ದಿನ ಹಾಗೂ ಮರುದಿನ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಖಾಸಗಿ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬನ್ನೂರು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಮೈಕ್ ಮೂಲಕ ಸಾರ್ವಜನಿಕವಾಗಿ ಪ್ರಚಾರ ಮಾಡುತ್ತಿರುವ ಪೊಲೀಸರು ವಾರ್ನಿಂಗ್ ನೀಡಿದ್ದಾರೆ.ಹಬ್ಬದ ದಿನಗಳಲ್ಲಿ ಇಸ್ಪೀಟ್ ಆಡಲು ಅನುಮತಿ ಇದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಹೀಗಾಗಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.

