ಮೈಸೂರು: ರೈಲ್ವೆ ಹಳಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಕಂಬಿಯ ಮೇಲೆ ತಲೆ ಇಟ್ಟು ಮಲಗಿ, ಯಾವುದೋ ರೈಲಿಗೆ ಸಿಕ್ಕಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ರಾತ್ರಿಯ ಸಮಯದಲ್ಲಿ ಯಾರು ಇಲ್ಲದ ವೇಳೆಯಲ್ಲಿ ರೈಲ್ವೆ ಕಂಬಿಗೆ ತಲೆಕೊಟ್ಟು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಸ್ಥಳಕ್ಕೆ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್, ಎಎಸ್ಐ ಪ್ರಸಾದ್, ಮಹದೇವಸ್ವಾಮಿ, ಕುಮಾರ್, ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿ ಅಪರಿಚಿತನಾಗಿದ್ದು, ಮೃತನ ಬಗ್ಗೆ ಪೊಲೀಸರು ಮಾಹಿತಿ ಕಲೆಯಾಗುತ್ತಿದ್ದಾರೆ. ಈ ಸಂಬಂಧ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.