ಮೈಸೂರು: ಹೆಚ್.ಡಿ ಕೋಟೆ ತಾಲ್ಲೂಕಿನ ಎನ್ ಬೇಗೂರು ಗ್ರಾಮದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಶೌಚಾಲಯ ಉಪಯೋಗಕ್ಕೆ ಬಾರದೆ ಇರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.
ಸುಮಾರು 5 ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಸಾರ್ವಜನಿಕ ಶೌಚಾಲಯವು ಬಳಕೆಯಾಗದೆ ಗಿಡಗಂಟೆಗಳು ಬೆಳದು ಹಾವು ಚೇಳುಗಳ ವಾಸಸ್ಥಾನವಾಗಿದೆ. ಎಚ್. ಡಿ. ಕೋಟೆ ಮತ್ತು ಸರಗೂರು ತಾಲ್ಲೂಕುಗಳಿಗೆ ತೆರಳಲು ಸಾವಿರಾರು ಜನರು ಈ ನಿಲ್ದಾಣಕ್ಕೆ ಬರುತ್ತಾರೆ.
ಆದರೆ ಶೌಚಾಲಯದ ಬಳಕೆ ಇಲ್ಲದ ಕಾರಣ ಬಯಲು ಶೌಚಾಲಯಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರಿಗೆ ತುಂಬಾ ಶೋಚನೆಯ ಪರಿಸ್ಥಿತಿ ಎದುರಾಗಿದೆ. ಇನ್ನೂ ಪಕ್ಕದಲ್ಲೇ ಇರುವ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಇರುವ ಜಾಗದಲ್ಲೇ ಮೂತ್ರ ವಿಸರ್ಜನೆ ಮಾಡಿ ಅಲ್ಲೂ ಸಹ ಅನೈರ್ಮಲ್ಯ ತಾಂಡವಾಡುತ್ತಿದೆ.
ಎನ್. ಬೇಗೂರು ಗ್ರಾಮ ಪಂಚಾಯಿತಿ ಕಣ್ಮುಚ್ಚಿ ಕುಳಿತಿದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶೌಚ ಗೃಹವನ್ನು ಸ್ವಚ್ಛಗೊಳಿಸಿ ಅನುಕೂಲ ಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

