Bengaluru 16°C

ಅದ್ದೂರಿಯಾಗಿ ನಡೆದ ವಾಲ್ಮೀಕಿ ಜಯಂತಿ: ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ಬಿ.ಹರ್ಷವರ್ಧನ್

ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಯುವಕರ ಸಂಘ ಮತ್ತು ಸಿ. ಚಿಕ್ಕರಂಗನಾಯಕ ಅಭಿಮಾನಿಗಳ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಮಾಜಿ ಶಾಸಕ ಬಿ. ಹರ್ಷವರ್ಧನ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

ನಂಜನಗೂಡು: ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಯುವಕರ ಸಂಘ ಮತ್ತು ಸಿ. ಚಿಕ್ಕರಂಗನಾಯಕ ಅಭಿಮಾನಿಗಳ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಮಾಜಿ ಶಾಸಕ ಬಿ. ಹರ್ಷವರ್ಧನ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.


ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಮಾಜಿ ಜಿ.ಪಂ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಚಿಕ್ಕರಂಗನಾಯಕ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಿ. ಚಿಕ್ಕ ರಂಗನಾಯಕ ಅಭಿಮಾನಿಗಳ ಬಳಗದ ನೂತನ ವರ್ಷದ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು.


ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲಾಯಿತು. ಬಳಿಕ ಮಹರ್ಷಿ ವಾಲ್ಮೀಕಿ ರವರ ಪುತ್ಥಳಿ ಇರುವ ರಥಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು.


ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಹರ್ಷವರ್ಧನ್, ಮಾಜಿ ಜಿಪಂ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಚಿಕ್ಕರಂಗನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ಮಹದೇವಸ್ವಾಮಿ, ನಾಯಕರ ಸಂಘದ ಅಧ್ಯಕ್ಷ ಬಂಗಾರಸ್ವಾಮಿ, ಬಿಜೆಪಿ ಅಧ್ಯಕ್ಷ ಕೆಂಡಗಣ್ಣಪ್ಪ, ಬಿಜೆಪಿ ನಗರ ಅಧ್ಯಕ್ಷ ಸಿದ್ದರಾಜು, ವಕೀಲ ಮಹೇಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲತಾ ಮುದ್ದು ಮೋಹನ್, ಗ್ರಾಪಂ ಸದಸ್ಯರಾದ ಗೋವಿಂದರಾಜು, ಮಹಾಲಕ್ಷ್ಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.


Nk Channel Final 21 09 2023