Categories: ಮೈಸೂರು

ಸರ್ಕಾರಿ ಜಾಗದಲ್ಲಿದ್ದ ಬೆಲೆಬಾಳುವ ಮರಗಳನ್ನು ನೆಲಕ್ಕುರುಳಿಸಿದ ಖದೀಮರು

ಮೈಸೂರು :  ನಂಜನಗೂಡು ತಾಲ್ಲೂಕಿನ ಮುಳ್ಳೂರು ಗ್ರಾಮದ ಸರ್ಕಾರಿ ಭೂಮಿಯಲ್ಲಿ ಬಾರಿ ಗಾತ್ರದ ಬೆಲೆಬಾಳುವ ಮರಗಳು ಬೆಳೆದು ನಿಂತಿದವು ಇದನ್ನು ಬಂಡವಾಳ ಮಾಡಿಕೊಳ್ಳುವ ಸಲುವಾಗಿ ಸರ್ಕಾರಿ ಭೂಮಿಯ ಸಮೀಪದ ಜಮೀನಿನನ್ನು ಒತ್ತುವರಿ ಮಾಡಿಕೊಂಡು ಬೃಹತ್ ಗಾತ್ರದ ಮರಗಳನ್ನು ಕಟಾವು ಮಾಡಿ, ಮಾರಾಟ ಮಾಡಲಾಗಿದೆ .

ರಾತ್ರೋರಾತ್ರಿ ನಾಸಿರ್ ಎಂಬಾತ ತನ್ನ ಸಹಪಾಠಿಗಳ ಜೊತೆ ಸೇರಿ ಬೆಲೆಬಾಳುವ ಬಾರಿ ಗಾತ್ರದ ಮರಗಳನ್ನು ನೆಲಕ್ಕುರುಳಿಸಿ ಎಸ್ಕೇಪ್ ಮಾಡಲು ಮುಂದಾಗಿದ್ದಾನೆ‌. ಇದನ್ನು ಗಮನಿಸಿದ ಅಂಬೇಡ್ಕರ್ ಸೇನೆಯ ತಾಲ್ಲೂಕು ಅಧ್ಯಕ್ಷ ಮುಳ್ಳೂರು ಸ್ವಾಮಿ ಮತ್ತು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಕೂಡಲೇ ನಂಜನಗೂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಚಾರ ಮುಟ್ಟಿಸಿದ್ದಾರೆ .

ಲಕ್ಷಾಂತರ ಬೆಳೆ ಬಾಳುವ ಹತ್ತಕ್ಕೂ ಹೆಚ್ಚು ಮರಗಳನ್ನು ಕಟಾವು ಮಾಡಲಾಗಿತ್ತು. ಇದನ್ನು ಕೂಡಲೇ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲು ಸಂಘಟಕರು ಆಗ್ರಹಿಸಿದ್ದಾರೆ. ಈಗಾಗಲೇ ಗೀಕಳ್ಳಿ ಗ್ರಾಮದ ಪುಟ್ಟಸ್ವಾಮಿ ಮತ್ತು ನಗರ್ಲೆ ಗ್ರಾಮದ ದಲ್ಲಾಳಿ ನಾಸೀರ್ ಎಂಬಾತನ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಆದರೂ ತಡ ರಾತ್ರಿ ಮರಗಳನ್ನು ಕಟಾವು ಮಾಡಿ ಬೇರೆ ಕಡೆ ಸಾಗಿಸಲು ಖದೀಮರು ಮುಂದಾಗಿದ್ದಾರೆ. ಕೆಲವು ಮರಗಳು ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ‌. ಕೂಡಲೇ ಆರೋಪಿಗಳನ್ನು ಬಂಧಿಸಬೇಕು . ಅರಣ್ಯ ಇಲಾಖೆ ಅಧಿಕಾರಿಗಳೇ ಖದೀಮರ ಜೊತೆ ಶಾಮಿಲಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ತನಿಖೆ ಮಾಡಿ ಅರಣ್ಯ ಇಲಾಖೆ ಸಿಬ್ಬಂದಿಗಳ ಹೆಸರಿಗೆ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಂಘಟಕರು ಆಗ್ರಹಿಸಿದ್ದಾರೆ.

Nisarga K

Recent Posts

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

15 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

32 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

43 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

2 hours ago