ಮೈಸೂರು : ಗೌಡನಕಟ್ಟೆ ಗ್ರಾಮಸ್ಥರಲ್ಲಿ  ಆತಂಕ ಸೃಷ್ಟಿಸಿದ ಹುಲಿಯನ್ನು ಸೆರೆ ಹಿಡಿಯಲಾಗಿದೆ.  ತಡರಾತ್ರಿ ತಾಯಿ ಹುಲಿ ಸೆರೆಯಾಗಿದೆ. ಮರಿ ಹುಲಿಗಳಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.

ಹುಲಿ ಸೆರೆಯಿಂದ ಗ್ರಾಮದ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಹುಣಸೂರು ತಾಲ್ಲೂಕು ಹನಗೋಡು ಹೋಬಳಿ ಗೌಡನಕ್ಟೆ ಗ್ರಾಮದಲ್ಲಿ ನಿನ್ನೆಯಷ್ಟೇ ಹುಲಿ ದಾಳಿಯಿಂದ  ಗ್ರಾಮದ ಇಬ್ಬರು ರೈತರು ಬಚಾವ್ ಆಗಿದ್ದಾರೆ.

ಹುಲಿ ಸೆರೆ ಹಿಡಿಯುವಂತೆ  ಗ್ರಾಮಸ್ಥರು ಒತ್ತಾಯಿಸಿದ್ದರು. ಗ್ರಾಮಸ್ಥರ ಆಕ್ರೋಶಕ್ಕೆ ರಾತ್ರಿ ಇಡೀ ಹುಲಿ ಸೆರೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸಿದರು. ತಡರಾತ್ರಿ ತಾಯಿ ಹುಲಿ ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದೆ.

ಗ್ರಾಮದ ಹೊರವಲಯದ ಹೊಲದ ಮಧ್ಯದಲ್ಲಿ ಹುಲಿ  ಅಡಗಿ ಕುಳಿತಿತ್ತು. ಅರೆವಳಿಕೆ ನೀಡಿ  ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿದಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.  ಮರಿ ಹುಲಿಗಳಿರುವ ಸಾಧ್ಯತೆ ಹಿನ್ನಲೆ ಕಾರ್ಯಾಚರಣೆ ಮುಂದುವರೆದಿದೆ. ನಾಲ್ಕು ಆನೆಗಳೊಂದಿಗೆ ಅರಣ್ಯ ಇಲಾಖೆಯ ಟಾಸ್ಕ್ ಪೋರ್ಸ್ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ.