News Karnataka Kannada
Saturday, April 27 2024
ಮೈಸೂರು

ತಾಲ್ಲೂಕು‌ ಪಂಚಾಯಿತಿಯಿಂದ ಮತದಾನ ಜಾಗೃತಿ; ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ

ಲೋಕಸಭಾ ಚುನಾವಣೆ 2024ರ ಅಂಗವಾಗಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಚಾಲನೆ ನೀಡಿದರು.
Photo Credit : NewsKarnataka

ನಂಜನಗೂಡು: ಲೋಕಸಭಾ ಚುನಾವಣೆ 2024ರ ಅಂಗವಾಗಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಚಾಲನೆ ನೀಡಿದರು.

ನಂಜನಗೂಡು ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ವತಿಯಿಂದ ಕಾರ್ಯಕ್ರಮ ಆಯೋಜಿಸಿದ್ದು, ಇಂದು ಸಂಜೆ 4 ಗಂಟೆಯ ಸಮಯದಲ್ಲಿ ತಾಲ್ಲೂಕು ಪಂಚಾಯಿತಿಯ ಎಲ್ಲಾ ಸಿಬ್ಬಂದಿಗಳು ಹಾಗೂ ಸ್ವಸಹಾಯ ಸಂಘದ ಮಹಿಳೆಯರು ಮತದಾನ ಕುರಿತು ಘೋಷವಾಕ್ಯಗಳನ್ನು ಕೂಗಿ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಲಾಯಿತು. ಜೊತೆಗೆ ಚಾಮಲಾಪುರ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಅರಿವು ಮೂಡಿಸಿದರು.
ಇದಕ್ಕೂ‌ ಮೊದಲು ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತದಾನ ಎಲ್ಲಾ ಸ್ವಸಹಾಯ ಸಂಘದ ಮಹಿಳೆಯರಿಗೆ ಹಾಗೂ ಸಿಬ್ಬಂದಿಗೆ ಪ್ರತಿಜ್ಙಾವಿಧಿ ಭೋದಿಸಿದರು.

ಈ ವೇಳೆ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಪೂರ್ಣಿಮಾ, ಲೆಕ್ಕ ಸಹಾಯಕರಾದ ಶ್ರೀಕಂಠನಾಯಕ, ವ್ಯವಸ್ಥಾಪಕರಾದ ಮಹದೇವನಾಯಕ, ತಾಲ್ಲೂಕು ಯೋಜನಾಧಿಕಾರಿಗಳು, ಸಹಾಯಕ ನಿರ್ದೇಶಕರು ಸೇರಿ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು