Categories: ಮೈಸೂರು

ತಾಲ್ಲೂಕು‌ ಪಂಚಾಯಿತಿಯಿಂದ ಮತದಾನ ಜಾಗೃತಿ; ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ

ನಂಜನಗೂಡು: ಲೋಕಸಭಾ ಚುನಾವಣೆ 2024ರ ಅಂಗವಾಗಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಚಾಲನೆ ನೀಡಿದರು.

ನಂಜನಗೂಡು ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ವತಿಯಿಂದ ಕಾರ್ಯಕ್ರಮ ಆಯೋಜಿಸಿದ್ದು, ಇಂದು ಸಂಜೆ 4 ಗಂಟೆಯ ಸಮಯದಲ್ಲಿ ತಾಲ್ಲೂಕು ಪಂಚಾಯಿತಿಯ ಎಲ್ಲಾ ಸಿಬ್ಬಂದಿಗಳು ಹಾಗೂ ಸ್ವಸಹಾಯ ಸಂಘದ ಮಹಿಳೆಯರು ಮತದಾನ ಕುರಿತು ಘೋಷವಾಕ್ಯಗಳನ್ನು ಕೂಗಿ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಲಾಯಿತು. ಜೊತೆಗೆ ಚಾಮಲಾಪುರ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಅರಿವು ಮೂಡಿಸಿದರು.
ಇದಕ್ಕೂ‌ ಮೊದಲು ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತದಾನ ಎಲ್ಲಾ ಸ್ವಸಹಾಯ ಸಂಘದ ಮಹಿಳೆಯರಿಗೆ ಹಾಗೂ ಸಿಬ್ಬಂದಿಗೆ ಪ್ರತಿಜ್ಙಾವಿಧಿ ಭೋದಿಸಿದರು.

ಈ ವೇಳೆ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಪೂರ್ಣಿಮಾ, ಲೆಕ್ಕ ಸಹಾಯಕರಾದ ಶ್ರೀಕಂಠನಾಯಕ, ವ್ಯವಸ್ಥಾಪಕರಾದ ಮಹದೇವನಾಯಕ, ತಾಲ್ಲೂಕು ಯೋಜನಾಧಿಕಾರಿಗಳು, ಸಹಾಯಕ ನಿರ್ದೇಶಕರು ಸೇರಿ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.

Maithri S

Recent Posts

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

3 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

26 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

53 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago