Categories: ಮೈಸೂರು

ಮಹಿಳೆಯರ ರಂಗೋಲಿಯಲ್ಲಿ ಮೂಡಿದ ಮತದಾನ ಜಾಗೃತಿ

ನಂಜನಗೂಡು: ಲೋಕಸಭಾ ಚುನಾವಣೆ ಹಿನ್ನೆಲೆ ನಂಜನಗೂಡು ತಾಲ್ಲೂಕಿನ ದೇಬೂರು ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರು ರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದ್ದಾರೆ.

ಇಂದು ಗುರುವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ದೇಬೂರು ಗ್ರಾಮದ ಲಕ್ಷ್ಮೀ ನಾರಾಯಣಸ್ವಾಮಿ ದೇವಾಲಯದ ಮುಂಭಾಗದ ರಸ್ತೆಯಲ್ಲಿ ಗ್ರಾಮದ ಸ್ವ ಸಹಾಯ ಸಂಘದ ಮಹಿಳೆಯರು ಸೇರಿದಂತೆ ಇತರರು ಬಣ್ಣದ ಬಣ್ಣದ ರಂಗೋಲಿ ಬಿಡಿಸಿ, ಮತದಾನದ ಜಾಗೃತಿ ಘೋಷವಾಕ್ಯಗಳನ್ನು ಬರೆದು ಕಡ್ಡಾಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸಿದರು.

ವೇದಿಕೆ ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಉಧ್ಘಾಟಿಸಿ ಮಾತನಾಡಿದ ಅವರು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರ ಮತವು ಅತ್ಯಮೂಲ್ಯವಾಗಿದ್ದು, ಯಾರೊಬ್ಬರು ಮತದಾನದಿಂದ ಹೊರಗುಳಿಯದೆ ತಮ್ಮ ಸಂವಿಧಾನದ ಹಕ್ಕನ್ನು ಚಲಾಯಿಸುವಂತೆ ಕರೆ ನೀಡಿದರು. ಹಾಗೂ ಚುನಾವಣೆ ಸಂಬಂಧ ಯಾವುದೇ ದೂರುಗಳಿದ್ದಲ್ಲಿ ಸಿವಿಜಿಲ್ ಆ್ಯಪ್ ಮೂಲಕ ದೂರು ಸಲ್ಲಿಸುವಂತೆ ತಿಳಿಸಿದರು.

ಬಳಿಕ ಅತ್ಯುತ್ತಮವಾಗಿ ರಂಗೋಲಿ ಬಿಡಿಸಿದ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ವೇದಿಕೆ ಕಾರ್ಯಕ್ರಮ ಬಳಿಕ ಮತದಾನ ಪ್ರಚಾರ ವಾಹನದೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ದಿವ್ಯ, ಸಂಜೀವಿನಿ ಸಮೂಹ ಮೇಲ್ವಿಚಾಲಕರಾದ ಹರೀಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೋಮಶೇಖರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Chaitra Kulal

Recent Posts

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

17 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

21 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

36 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

42 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

53 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

1 hour ago