Categories: ಮೈಸೂರು

ನಂಜನಗೂಡಿನ ಬಸ್, ರೈಲ್ವೆ ನಿಲ್ದಾಣಗಳಲ್ಲಿ ಮತದಾನ ಜಾಗೃತಿ

ಮೈಸೂರು :  ಮತದಾನದ ದಿನ ರಜೆಯ ದಿನ ಅಲ್ಲ. ಅಂದು ಪ್ರವಾಸವನ್ನು ಕೈಗೊಳ್ಳದೆ ಜವಾಬ್ದಾರಿಯುತ ನಾಗರಿಕರಾಗಿ ಸಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ವತಿಯಿಂದ ನಿತ್ಯ ವಿನೂತನ ರೀತಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಇಂದು ನಂಜನಗೂಡು ನಗರದ ರೈಲ್ವೆ ನಿಲ್ದಾಣ ಹಾಗೂ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಏಪ್ರಿಲ್ 26 ರಂದು ಪ್ರವಾಸ ಕೈಗೊಳ್ಳದೆ ತಪ್ಪದೆ ಮತದಾನ ಮಾಡುವಂತೆ ಅರಿವು ಮೂಡಿಸಿದ್ದಾರೆ.

ಹೆಚ್ಚು ಜನಸಂದಣಿ ಇರುವ ಬಸ್ ನಿಲ್ದಾಣದಲ್ಲಿ ತಮ್ಮ ತಮ್ಮ ಹಳ್ಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಹಿರಿಯರು, ಕಾಲೇಜು ಯುವಕ- ಯುವತಿಯರು ಸೇರಿದಂತೆ ಎಲ್ಲಾ ಸಾರ್ವಜನಿಕರಿಗೆ ಸಮೃದ್ಧ ಮತ್ತು ಸದೃಢ ದೇಶ ಕಟ್ಟಲು ಪ್ರತಿಯೊಬ್ಬರ ಮತವು ಅತ್ಯಮೂಲ್ಯ ಎಂಬುದನ್ನು ಮನದಟ್ಟು ಮಾಡಲಾಯಿತು.

ಇನ್ನೊಂದೆಡೆ ರೈಲು ನಿಲ್ದಾಣದಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಜಾಗೃತ ಗೀತೆ, ಘೋಷವಾಕ್ಯಗಳನ್ನು ಕೇಳಿಸಿ, ಮತದಾನ ದಿನ ರಜೆ ಎಂದು ಭಾವಿಸದೆ ಮತ ಹಾಕುವ ಮೂಲಕ ಚುನಾವಣಾ ಹಬ್ಬವನ್ನು ಆಚರಿಸುವಂತೆ ಕರೆ ನೀಡಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯ ದಿನೇಶ್, ಬಸವರಾಜು, ರವಿ, ಕಾವ್ಯ ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿದ್ದರು.

Nisarga K

Recent Posts

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

4 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

9 mins ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

13 mins ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

20 mins ago

ಆಟೋ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ…

30 mins ago

100ರ ಮುಖ ಬೆಲೆಯ ಹಳೆ ಮಾದರಿ ನೋಟು ರದ್ದಾಗದಿದ್ದರೂ ಚಲಾವಣೆಗೆ ಹಿಂದೇಟು

ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…

39 mins ago