ಮೈಸೂರು: 2028ಕ್ಕೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದು ನಂಜನಗೂಡಿನಲ್ಲಿ ಮಾಜಿ ಶಾಸಕ ಬಿ.ಹರ್ಷವರ್ಧನ್ ಹೇಳಿಕೆ ನೀಡಿದ್ದಾರೆ.

ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಗೆ ನಾವು ಕೂಡ ಭಾಗವಹಿಸಿದ್ದವು. ಜನ ಸಮೂಹ ಹೆಚ್ಚಾಗಿ ಸೇರಿದೆ. ಸಾಗರದಷ್ಟು ಜನರು ಪಾದಯಾತ್ರೆಯಲ್ಲಿ ಬರುತ್ತಿದ್ದಾರೆ. ಶ್ರೀರಾಮುಲು ಮತ್ತು ವಿಜಯೇಂದ್ರ ಅವರ ಹಿಂದೆ ಜನ ಸಮೂಹ ಬಂದಿದೆ. ಇಂದು ಕೂಡ ನಾಲ್ಕು ಗಂಟೆಗೆ ಪಾದಯಾತ್ರೆ ನಡೆಯುತ್ತಿದೆ. 2028ಕ್ಕೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆ ಆಗಲಿದೆ ಎಂದರು.

ಇದು ಬಳ್ಳಾರಿಯಿಂದಲೇ ಪ್ರಾರಂಭವಾಗಲಿದೆ. ಜನಾರ್ದನ ರೆಡ್ಡಿ ಅವರು ಮತ್ತು ಶ್ರೀರಾಮುಲು ಕೈ ಜೋಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾವು ನಮ್ಮ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ನಾವು ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ. ಗ್ರಾಮ ಪಂಚಾಯತಿ ಚುನಾವಣೆ ವಿಚಾರವಾಗಿ ಹೈಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಅದಕ್ಕೆ ನವೆಂಬರ್ ಡಿಸೆಂಬರ್ ನಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸರ್ಕಾರ ಮುಂದಾಗಿದೆ.

ಗ್ರಾಮ ಪಂಚಾಯತಿ ಪಕ್ಷದ ಚಿಹ್ನೆಯಿಂದ ಚುನಾವಣೆ ನಡೆಯುವುದಿಲ್ಲ. ಹಾಗಾಗಿ ಅಧಿಕಾರ ಇರಲಿ ಇರದಿರಲಿ, ಹೆಚ್ಚು ಸೀಟುಗಳನ್ನು ತೆಗೆದುಕೊಳ್ಳುತ್ತೇವೆ. ಇತ್ತೀಚಿನ ದಿನಗಳಲ್ಲಿ ವಿದ್ಯುತ್ ಕಡಿತವಾಗುತ್ತಿದೆ. ನಂಜನಗೂಡಿನಲ್ಲಿ ರಾತ್ರೋರಾತ್ರಿ ವಿದ್ಯುತ್ ಕಟ್ ಮಾಡುತ್ತಿದ್ದಾರೆ. ರೈತರಿಗೆ ಜಮೀನಿನಲ್ಲಿ ಬೆಳೆ ಒಣಗುತ್ತಿವೆ ರೈತರಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ. ದಸರಾ ಇನ್ನೊಂದು ತಿಂಗಳಿದೆ. ಈ ಬಾರಿ ದಸರವನ್ನು ಧೂಳಿಪಟ ಮಾಡುತ್ತಾರೆ. ಮೈಸೂರಿನಲ್ಲಿ ಬರಿ ಧೂಳೆ ತುಂಬಿದೆ, 25 ಲಕ್ಷಕ್ಕೂ ಹೆಚ್ಚು ಜನರು ಸೇರುತ್ತಾರೆ. ಜಿಲ್ಲಾಧಿಕಾರಿಗಳು ಬೇಗ ಗಮನ ಹರಿಸಬೇಕು ಎಂದು ನಂಜನಗೂಡಿನಲ್ಲಿ ಮಾಜಿ ಶಾಸಕ ಬಿ. ಹರ್ಷವರ್ಧನ್ ಹೇಳಿಕೆ ‌ನೀಡಿದ್ದಾರೆ.