ಮೈಸೂರು : ಗೃಹಲಕ್ಷ್ಮಿ ಹಣದಲ್ಲಿ ವರ ಮಹಾಲಕ್ಷ್ಮಿ ಹಬ್ಬ ಆಚರಿಸಿದ್ದು, ಸಿಎಂ ಸಿದ್ದರಾಮಯ್ಯಗೆ ಒಳಿತಾಗಲೆಂದು ಮಹಿಳೆ ಪೂಜೆ ಸಲ್ಲಿಸಿದರು.
ಜೊತೆಗೆ ಬಾಕಿ 3 ತಿಂಗಳ ಹಣ ಹಾಕುವಂತೆಯೂ ಸಿಎಂಗೆ ಮನವಿ ಮಾಡಲಾಯಿತು. ಮೈಸೂರಿನ ಆಲನಹಳ್ಳಿ ನಿವಾಸಿ ಜ್ಯೋತಿ ಮಹದೇವ ಸ್ವಾಮಿ ಮನವಿ ಮಾಡಿಕೊಂಡರು. ಭಕ್ತಿ ಭಾವದಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ ಮಾಡಲಾಯಿತು.
ಸಿಎಂ ಸಿದ್ದರಾಮಯ್ಯ ಭಾವಚಿತ್ರ ಹಿಡಿದು ಪೂಜೆ ಸಲ್ಲಿಕೆ ಮಾಡಲಾಯಿತು. ಸಿದ್ದರಾಮಯ್ಯಗೆ ಒಳಿತಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಎರಡು ವರ್ಷದಿಂದ ನಮ್ಮ ಖಾತೆಗೆ ಗೃಹಲಕ್ಷ್ಮಿ ಹಣವನ್ನು ಸರ್ಕಾರ ನೀಡುತ್ತಿದೆ. ಬಡವರಿಗೆ ಗೃಹಲಕ್ಷ್ಮಿ ಹಣದಿಂದ ಹಬ್ಬ ಹರಿದಿನಗಳನ್ನು ಆಚರಿಸಲು ಅನುಕೂಲವಾಗುತ್ತಿದೆ.
ಮೂರು ತಿಂಗಳಿಂದ ಖಾತೆಗೆ ಗೃಹಲಕ್ಷ್ಮಿ ಹಣ ಬಂದಿಲ್ಲ ಅದಕ್ಕೆ ಸ್ವಲ್ಪ ಸರಳವಾಗಿ ಆಚರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬರುವ ನಿರೀಕ್ಷೆ ಮಾಡುತ್ತಿದ್ದೇವೆ. ಇದಕ್ಕೆ ಮುಖ್ಯ ಕಾರಣರಾದ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಒಳಿತಾಗಲೆಂದ ಜ್ಯೋತಿ ಹೇಳಿದರು.

