ನಂಜನಗೂಡು: ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡಗಳನ್ನು ನೆಡುವ ಮೂಲಕ ಆಚರಣೆ ಮಾಡಲಾಯಿತು.
ಕಾಲೇಜಿನ ಆವರಣದಲ್ಲಿ ಸಸಿ ನೆಡುವ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ ದಿನೇಶ್ ಮಾತನಾಡಿ, ಕೇವಲ ಸಾಂಕೇತಿಕವಾಗಿ ಗಿಡ ನೆಟ್ಟರೆ ಸಾಲದು ನೆಟ್ಟ ಗಿಡವನ್ನು ಬೆಳೆಯುವ ತನಕ ಪೋಷಿಸಿದರೆ ಈ ದಿನಾಚರಣೆಗೆ ಸಾರ್ಥಕತೆ ಬರುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಗಂಗಾಧರ್, ಉಪ ವಲಯ ಅರಣ್ಯಾಧಿಕಾರಿ ದಯಾನಂದ್, ಕಿಶೋರ್, ಅರಣ್ಯ ಪಾಲಕ ಮಂಜುನಾಥ್, ಕಾಲೇಜಿನ ಹಿರಿಯ ಉಪನ್ಯಾಸಕ ಅಶ್ವತ್ ನಾರಾಯಣಗೌಡ, ಸರ್ಕಾರಿ ನೌಕರರ ಅಧ್ಯಕ್ಷ ರಂಗಸ್ವಾಮಿ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಡಾ.ಟಿ ಕೆ ರವಿ ದಿನೇಶ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

