ಬೆಂಗಳೂರು: 2013-14ನೇ ಸಾಲಿನಿಂದ 2021-22ರವರೆಗೆ 5 ಸಾವಿರ ಟನ್ ತುಪ್ಪವನ್ನು ತಿರುಪತಿ ದೇವಸ್ಥಾನಕ್ಕೆ ಸರಬರಾಜು ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಆರಂಭಿಕವಾಗಿ 350 ಟನ್ ತುಪ್ಪವನ್ನು ಸರಬರಾಜು ಮಾಡಲು ಟೆಂಡರ್ ಮೂಲಕ ಬೇಡಿಕೆ ಬಂದಿದೆ.
ಬೇಡಿಕೆಗೆ ಅನುಗುಣವಾಗಿ ಹಸುವಿನ ತುಪ್ಪವನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತದೆ ಎಂದು ಕೆಎಂಎಫ್ ತಿಳಿಸಿದೆ.
ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದಕ್ಕೆ ನಮ್ಮ ನಂದಿನಿ ತುಪ್ಪವನ್ನು ಸರಬರಾಜು ಮಾಡಲಾಗುತ್ತಿದ್ದು, ತುಪ್ಪದ ಟ್ಯಾಂಕರ್ ಗೆ ಸಿಎಂ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷರಾದ ಭೀಮಾನಾಯಕ್ ಮತ್ತು KMF MD ಜಗದೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳವು ಕಳೆದ 05 ದಶಕಗಳಿಂದಲೂ ತನ್ನ ಸದಸ್ಯ ಹಾಲು ಒಕ್ಕೂಟಗಳ ಮೂಲಕ ರಾಜ್ಯದ 24 ಲಕ್ಷಕ್ಕೂ ಹೆಚ್ಚು ಹೈನುಗಾರರಿಂದ ಹಾಲನ್ನು ಖರೀದಿಸಿ, ಸಂಸ್ಕರಿಸಿ, “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯನ್ನು ಹೊತ್ತು “ನಂದಿನಿ” ಬ್ಯಾಂಡಿನಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರ ಅಭಿರುಚಿಗೆ ತಕ್ಕಂತೆ ಪರಿಚಯಿಸಿರುತ್ತದೆ. “ನಂದಿನಿ” ಯು ಕರ್ನಾಟಕ ರಾಜ್ಯದ ಮನೆ ಮಾತಾಗಿರುವ ಬ್ಯಾಂಡ್ ಆಗಿರುವುದಲ್ಲದೇ, ರಾಷ್ಟ್ರಾದ್ಯಂತ ಗ್ರಾಹಕರು ಗುರುತಿಸುವ ಪ್ರತಿಷ್ಠಿತ ಹಾಲಿನ ಬ್ಯಾಂಡ್ ಆಗಿ ಹೊರಹೊಮ್ಮಿರುತ್ತದೆ.
2013-14ನೇ ಸಾಲಿನಿಂದ 2021-22ರವರೆಗೆ 5 ಸಾವಿರ ಟನ್ ತುಪ್ಪವನ್ನು ತಿರುಪತಿ ದೇವಸ್ಥಾನಕ್ಕೆ ಸರಬರಾಜು ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಆರಂಭಿಕವಾಗಿ 350 ಟನ್ ತುಪ್ಪವನ್ನು ಸರಬರಾಜು ಮಾಡಲು ಟೆಂಡರ್ ಮೂಲಕ ಬೇಡಿಕೆ ಬಂದಿದೆ. ಬೇಡಿಕೆಗೆ ಅನುಗುಣವಾಗಿ ಹಸುವಿನ ತುಪ್ಪವನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತದೆ ಎಂದು ಕೆಎಂಎಫ್… pic.twitter.com/6CZu7wJX5c
— DIPR Karnataka (@KarnatakaVarthe) August 29, 2024

