ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳಿ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು. ಒಂದು ಲೀಟರ್ ನಂದಿನಿ ಹಾಲಿನಪ್ಯಾಕೆಟ್ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು.
ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದರು. ಕೆಎಂಎಫ್ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.