Bengaluru 23°C
Ad

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ : 4 ರಾಜ್ಯಗಳಿಗೆ ಎನ್‌ಐಎ ದಾಳಿ : 11 ಮಂದಿ ವಶಕ್ಕೆ!

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಹುಬ್ಬಳ್ಳಿ ಇಬ್ಬರು ಸಹೋದರರು ಸೇರಿದಂತೆ ಒಟ್ಟು 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಹುಬ್ಬಳ್ಳಿ ಇಬ್ಬರು ಸಹೋದರರು ಸೇರಿದಂತೆ ಒಟ್ಟು 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆ ಚುರುಕುಗೊಳಿಸಿದ್ದು, ಮಂಗಳವಾರ ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.

ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಇಂದು ಪತ್ತೆಯಾದ 11 ಮಂದಿ ಶಂಕಿತರಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ 2012ರ ಲಷ್ಕರ್–ಎ–ತಯ್ಬಾ (ಎಲ್‌ಇಟಿ) ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗಳೂ ಸೇರಿದ್ದಾರೆ. ದಾಳಿ ವೇಳೆ ಡಿಜಿಟಲ್ ಪರಿಕರಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

https://x.com/NIA_India/status/1792925208354955617

 

Ad
Ad
Nk Channel Final 21 09 2023
Ad