ತಿರುವನಂತಪುರಂ: ನೆರೆಯ ರಾಜ್ಯ ಕೇರಳದಲ್ಲಿ ಮತ್ತೆ ನಿಫಾ ವೈರಸ್ ಆತಂಕ ಹೆಚ್ಚುತ್ತಿದ್ದು, 14 ವರ್ಷದ ಬಾಲಕನಲ್ಲಿ ಈ ಮಾರಣಾಂತಿಕ ವೈರಸ್ ಪತ್ತೆ ಆಗಿದೆ. ಈಗಾಗಲೇ ಡೆಂಗ್ಯೂ ವೈರಸ್ ಕೇಸ್‌ಗಳು ದಿನೇ ದಿನೇ ಹೆಚ್ಚುತ್ತಿರುವ ಭೀತಿಯಲ್ಲಿರುವ ಕರ್ನಾಟಕಕ್ಕೆ ಇದೀಗ ನಿಫಾ ವೈರಸ್ ಆತಂಕ ಕಾಡಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಇದರ ಪರಿಣಾಮ ಇದೀಗ ಹೈ ಅಲರ್ಟ್ ಘೋಷಿಸಲಾಗಿದೆ.
ಇನ್ನು ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಚಾರ್ಜ್ ಪ್ರತಿಕ್ರಿಯಿಸಿದ್ದು, 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಬಾಲಕನ ಮೊದಲ ಸಂಪರ್ಕಿತರನ್ನು ಪತ್ತೆ ಹಚ್ಚೆ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಸಂಭವನೀಯ ವೈರಸ್ ಹರಡುವಿಕೆಯ ಬಗ್ಗೆ ರಾಜ್ಯ ಸರ್ಕಾರ ಜಾಗರೂಕತೆ ವಹಿಸಿದೆ. ನಿಫಾ ವೈರಸ್ ಹರಡುವುದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

