ಬೆಂಗಳೂರು: ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಬೆನ್ನಲ್ಲೇ ಬಿಎಸ್‌ವೈ ವಿರುದ್ಧ ಕಾನೂನು ಪ್ರಕ್ರಿಯೆಯನ್ನು ಸರ್ಕಾರ ತೀವ್ರಗೊಳಿಸಿದೆ.
ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಆದೇಶ ತೆರವು ಕೋರಿ ಸಿಐಡಿ ಎಸ್‌ಪಿಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ಇಂದು(ಆಗಸ್ಟ್ 22) ಕೈಗೆತ್ತಿಕೊಂಡ ಹೈಕೋರ್ಟ್, ಬಿಎಸ್‌ವೈ ಪರ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಆಗಸ್ಟ್ 30ಕ್ಕೆ ಮುಂದೂಡಿದೆ. ಇದರಿಂದ ಯಡಿಯೂರಪ್ಪ ಮತ್ತೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಮಧ್ಯಂತರ ರಕ್ಷಣೆ ತೆರವು ಮಾಡಲು ಹೈಕೋರ್ಟ್‌ಗೆ ಸಿಐಡಿ ಮೆಮೋ ಸಲ್ಲಿಕೆ ಮಾಡಿತ್ತು. ಇಂದು (ಆಗಸ್ಟ್ 22) ಸಿಐಡಿ ಪರ ಎಸ್‌ಪಿಪಿ ಅಶೋಕ್ ನಾಯ್ಕ್ ಅವರು ಮೆಮೋ ಸಲ್ಲಿಕೆ ಮಾಡಿದ್ದು, ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಧ್ಯಾಹ್ನ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತ್ತು. ಅದರಂತೆ ಕೋರ್ಟ್ ವಿಚಾರಣೆ ನಡೆಸಿತು. ಆದ್ರೆ, BSY ಪರ ವಕೀಲರು, ಹಿರಿಯ ವಕೀಲರ ವಾದಮಂಡನೆಗೆ ಕಾಲಾವಕಾಶ ಕೋರಿದ್ದಾರೆ. ಹೀಗಾಗಿ ಹೈಕೋರ್ಟ್, ಅರ್ಜಿ ವಿಚಾರಣೆ ಆಗಸ್ಟ್ 30ಕ್ಕೆ ಮುಂದೂಡಿದೆ.

