ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ 402 PSI ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಮೇ 8 ರಂದು ನಿಗದಿಯಾಗಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿದೆ.
ಅಲ್ಲದೆ, ಶೀಘ್ರದಲ್ಲೇ ಮುಂದಿನ ದಿನಾಂಕವನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.
2021ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಹುದ್ದೆಗಳು ಇವಾಗಿದ್ದು, ಮೇ 8 ರಂದು ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಈ ವೇಳಾಪಟ್ಟಿಗೆ ಯಾವುದೇ ಆಕ್ಷೇಪಣೆ ಹಾಗೂ ಆಡಳಿತಾತ್ಮಕ ಸಮಸ್ಯೆಗಳು ಎದುರಾಗದಿದ್ದಲ್ಲಿ ಇದೇ ದಿನಾಂಕದಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.