Bengaluru 22°C
Ad

ಸಂಸದ ಪ್ರಜ್ವಲ್ ರೇವಣ್ಣ 6 ದಿನ ಎಸ್ಐಟಿ ಕಸ್ಟಡಿಗೆ; ಕೋರ್ಟ್​ ಆದೇಶ

Pr

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6 ರವರೆಗೆ ಅಂದರೆ ಆರು ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿ ಕೋರ್ಟ್​ ಆದೇಶ ಹೊರಡಿಸಿದೆ.

ಕಳೆದ ದಿನ ಮಧ್ಯರಾತ್ರಿ ಜರ್ಮನಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಅವರನ್ನು ಎಸ್​ಐಟಿ ಬಂಧಿಸಿದ್ದು, ಇಂದು(ಮೇ 31) ಅವರನ್ನು ವೈದ್ಯಕೀಯ ತಪಾಸಣೆ ಮಾಡಿಸಿ ಬಳಿಕ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆ ಅಗತ್ಯವಿರುವುದರಿಂದ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದೆ.

ಎಸ್​ಐಟಿ ಮನವಿ ಪುರಸ್ಕರಿಸಿದ ಕೋರ್ಟ್​, ಪ್ರಜ್ವಲ್ ರೇವಣ್ಣನನ್ನು ಏಳು ದಿನ ಎಸ್​ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಎಸ್​ಐಟಿ ಪರವಾಗಿ ಎಸ್‌ಪಿಪಿ ಅಶೋಕ್ ನಾಯಕ್‌ ಅವರು ವಾದ ಮಂಡಿಸಿದರೆ, ಪ್ರಜ್ವಲ್​ ಪರ ಅರುಣ್​ ವಾದ ಮಂಡಿಸಿದರು.

 

Ad
Ad
Nk Channel Final 21 09 2023
Ad