ಬೆಂಗಳೂರು: ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರುಪಾಲಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 ರಿಂದ 70 ರೂಪಾಯಿ ಆಗಿದೆ.
ಈರುಳ್ಳಿ ಉತ್ಪಾದನೆ ಭಾರಿ ಕುಸಿತ
ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ. ಪರಿಣಾಮವಾಗಿ ಪೂರೈಕೆ ಕೂಡ ಕಡಿಮೆಯಾಗಿದೆ. ಸದ್ಯ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳಲಾಗುತ್ತಿದೆ.
ಬೆಳ್ಳುಳ್ಳಿ ಬೆಲೆಯೂ ಏರಿಕೆ
ಈ ಮಧ್ಯೆ ಬೆಳ್ಳುಳ್ಳಿ ಕೆಜಿಗೆ 400 ರೂ. ಆಗಿದೆ. ತರಕಾರಿಗಳ ಬೆಲೆ ಕೂಡ ಕೊಂಚ ಜಾಸ್ತಿಯಾಗಿದೆ. ಮಳೆ ಇದೇ ರೀತಿ ಮುಂದುವರಿದರೆ ತರಕಾರಿ ಹಾಗೂ ಈರುಳ್ಳಿಯ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಅಂತ ವ್ಯಾಪಾರಸ್ಥರು ಅಂದಾಜಿಸಿದ್ದಾರೆ.
ಒಟ್ಟಿನಲ್ಲಿ ಮಳೆಯ ಕಾರಣದಿಂದಾಗಿ ಈರುಳ್ಳಿ ಬೆಲೆ ಒಂದೇ ವಾರದಲ್ಲಿ 60 ರಿಂದ 70 ರೂ. ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆ ಇದ್ದು ಗ್ರಾಹಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ.