ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ ನಡೆಯಿತು.
ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಭಾಗವಹಿಸಿದ್ದರು.
ವಜಾಗೊಳಿಸಿ ಬಂಧಿಸಬೇಕು. ಬಿಜೆಪಿಯವರಿಗೆ ಸಂವಿಧಾನ ಹಾಗೂ ಅಂಬೇಡ್ಕರ್ ಬಗ್ಗೆ ಗೌರವ ಇಲ್ಲ ಎಂದು ಪ್ರತಿಭಟನಾಕಾರರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು, ಪ್ರತಿಭಟನಾ ಸ್ಥಳಕ್ಕಾಗಮಿಸಿದ ಅಪರ ಜಿಲ್ಲಾಧಿಕಾರಿ ಗೀತಾ ಹುಜೀದ ಅವರಿಗೆ
ಮನವಿ ಸಲ್ಲಿಸಿ ಪ್ರತಿಭಾಟನೆಯನ್ನು ಅಂತ್ಯಗೊಳಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೇಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಚುಡಾ ಅಧ್ಯಕ್ಷ ಮುಹಮ್ಮದ್ ಅಸ್ಗರ್, ಜಿಲ್ಲಾ ಕಾಂಗ್ರೇಸ್ ವಕ್ತಾರ ಕೆರೆಹಳ್ಳಿ ನವೀಶ್, ಹಾಗೂ ಇನ್ನಿತರ ಕಾಂಗ್ರೇಸ್ ಮುಖಂಡರು ಭಾಗವಹಿಸಿದ್ದರು.
ಇನ್ನೊಂದೆಡೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚವ ಅಮಿತ್ ಶಾ ರವರ ವಿರುದ್ದ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರು ಪ್ರತಿಭಟನೆ ನಡೆಸಿದರು. ಚಾಮರಾಜನಗರದ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ವಕೀಲರ
ಸಂಘದ ಸಭಾಂಗಣದಲ್ಲಿ ಸಭೆ ಯದ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು. ಬಳಿಕ ಅಲ್ಲಿಂದ ಜಿಲ್ಲಾಡಳಿತ ಭವನಕ್ಕೆ ತೆರಳಿ ತೆರಳಿ ಕೆಲಕಾಲ ಪ್ರಭಟನೆ ನಡೆಸಿದದ ಜಿಲ್ಲಾ ವಕೀಲರ ಸಂಘ ಚಾಮರಾಜನಗರ ಎಡಿಸಿ ಗೀತಾ ಹುಡೇದ ಅದರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ದೊಡ್ಡಮೋಳೆ ರಂಗಸ್ವಾಮಿ ಮಾತನಾಡಿ, ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜನಾದು ನೀಡಬೇಕು. ಇದೊಂದು ದೇಶಕ್ಕೆ ಮಾಡಿದ ಅಪಮಾನವಾಗಿದೆ. ಅಮಿತ್ ಶಾ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು
ಪ್ರತಿಭಟನೆಯಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ನಂಜಯ್ಯ, ವಕೀಲರಾದ ದಲಿತ್ ರಾಜ್, ನೋಟರಿ ನಾಗಣ್ಣ, ಮಾದೇಶ್, ಪೃಥ್ವಿ ನಗರಯ್ಯನ ಮಲ್ಲು ಸೇರಿದಂತೆ ಹಿರಿಯರು ಹಾಗೂ ಹಾಗೂ ಇತರರು ಹಾಜರಿದ್ದರು.

