Bengaluru 22°C
Ad

ಕನ್ನಡಿಗರಿಗೆ ಕಡ್ಡಾಯ ಉದ್ಯೋಗಕ್ಕಾಗಿ ಆಗ್ರಹಿಸಿ ಇಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

Karave

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗಕ್ಕಾಗಿ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಇಂದು (ಜುಲೈ 1) ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಇಂದು ರಾಜಧಾನಿ ಬೆಂಗಳೂರು ಬೃಹತ್ ಪ್ರತಿಭಟನೆಗೆ ಸಾಕ್ಷಿಯಾಗಲಿದೆ. ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ.

Ad
300x250 2

ಹೌದು. . .ಇಂದು ರಾಜ್ಯದಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಚಳುವಳಿಗೆ ಕರೆ ನೀಡಿದೆ. ಬೆಳಿಗ್ಗೆ 11 ಗಂಟೆಯಿಂದ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಶುರುವಾಗಲಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಪ್ರತಿಭಟನೆಗೆ ಆಯೋಜನೆ ಮಾಡಿಕೊಳ್ಳಲಾಗಿದೆ. ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು‌ ಆಗ್ರಹಿಸಿ ಈ ಬೃಹತ್ ಹೋರಾಟಕ್ಕೆ ಮುಂದಾಗಿದೆ. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಚಳುವಳಿ ನಡೆಸಲು ನಿರ್ಧಾರ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ಸಿಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಹಾಗಾಗಿ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ಗ್ರೂಪ್​​ನಲ್ಲಿ ಕನ್ನಡಿಗರಿಗೆ ಶೇಕಡಾ 100 ರಷ್ಟು ಮೀಸಲಾತಿ ನೀಡಬೇಕು. ಇತರ ಗ್ರೂಪ್​ಗಳಲ್ಲಿ ಶೇಕಡಾ 80 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ನಾರಾಯಣಗೌಡ ಹೇಳಿದ್ದಾರೆ.

Ad
Ad
Nk Channel Final 21 09 2023
Ad