ಬೆಂಗಳೂರು: ಸೆಪ್ಟೆಂಬರ್ 28ಕ್ಕೆ ನಿಗದಿಯಾಗಿದ್ದ 402 ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ. ಪಿಎಸ್‌ಐ ಪರೀಕ್ಷೆ ಬರೆಯಲಿರುವ ಹಲವು ಅಭ್ಯರ್ಥಿಗಳು ಇತರೆ ಸರ್ಕಾರಿ ಹುದ್ದೆಗಳ ಪರೀಕ್ಷೆಗಳನ್ನು ತೆಗೆದುಕೊಂಡಿದ್ದು, ಅವರಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಗೃಹ ಸಚಿವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್‌ಐ ಹುದ್ದೆಗಳಿಗೆ ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಸೆ.28ರಂದು ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು. ಆದರೆ ಆ ದಿನವೂ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನಾಂಕದಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

— Dr. G Parameshwara (@DrParameshwara) September 12, 2024