Bengaluru 23°C
Ad

ಎಲೆಕ್ಟ್ರಿಕ್‌ ಚಾರ್ಜಿಂಗ್ ಬ್ಯಾಟರಿ ಅಂಗಡಿಗೆ ಬೆಂಕಿ: ವಸ್ತುಗಳು ಸುಟ್ಟು ಭಸ್ಮ

ಶಾರ್ಟ್ ಸರ್ಕ್ಯೂಟ್‌ನಿಂದ  ಎಲೆಕ್ಟ್ರಿಕ್‌ ಚಾರ್ಜಿಂಗ್ ಬ್ಯಾಟರಿ ಅಂಗಡಿಗೆ ಬೆಂಕಿ ತಗುಲಿದ ಘಟನೆ ನಗರದ ಮಹಾವೀರ ಚೌಕ್‌ನಲ್ಲಿ ನಡೆದಿದೆ. 

ರಾಯಚೂರು: ಶಾರ್ಟ್ ಸರ್ಕ್ಯೂಟ್‌ನಿಂದ  ಎಲೆಕ್ಟ್ರಿಕ್‌ ಚಾರ್ಜಿಂಗ್ ಬ್ಯಾಟರಿ ಅಂಗಡಿಗೆ ಬೆಂಕಿ ತಗುಲಿದ ಘಟನೆ ನಗರದ ಮಹಾವೀರ ಚೌಕ್‌ನಲ್ಲಿ ನಡೆದಿದೆ.

ಅದೃಷ್ಟವಶಾತ್ ಅಂಗಡಿಯಲ್ಲಿದ್ದ ಕೆಲಸಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ  ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಮೂರು ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಆವರಿಸಿದ್ದು ಸುತ್ತಮುತ್ತಲಿನ ಅಂಗಡಿಗಳ ವ್ಯಾಪಾರಸ್ಥರು ಸಹ ಆತಂಕಕ್ಕೆ ಒಳಗಾಗಿದ್ದರು.

ರಾಯಚೂರಿನ  ಆರ್.ಕೆ ಭಂಡಾರಿ ‌ಎಂಬುವವರಿಗೆ ಸೇರಿದ ಅಂಗಡಿಗೆ ಬೆಂಕಿ ತಗುಲಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ಈ ಸಂಬಂಧ ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ad
Ad
Nk Channel Final 21 09 2023
Ad