Bengaluru 21°C
Ad

ಲಿಂಗಸುಗೂರಿನಲ್ಲಿ ಮಧ್ಯರಾತ್ರಿ ಭಾರೀ ಮಳೆ: 60 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಲಿಂಗಸುಗೂರು ಪಟ್ಟಣದಲ್ಲಿ ಮಧ್ಯರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಪಟ್ಟಣದ ಪಿಂಚಣಿಪುರ ಓಣಿಯಲ್ಲಿ 60 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ.

ರಾಯಚೂರು: ಲಿಂಗಸುಗೂರು ಪಟ್ಟಣದಲ್ಲಿ ಮಧ್ಯರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಪಟ್ಟಣದ ಪಿಂಚಣಿಪುರ ಓಣಿಯಲ್ಲಿ 60 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ.

ಮಧ್ಯರಾತಿ ಜನ ನಿದ್ರೆಗೆ ಜಾರಿದ್ದ ವೇಳೆ ಮಳೆ ನೀರು ಮನೆಗಳಿಗೆ ನುಗ್ಗಿದೆ. ಇದರಿಂದಾಗಿ ಮನೆಯಲ್ಲಿದ್ದ ದವಸ ಧಾನ್ಯಗಳು ನೀರುಪಾಲಾಗಿದ್ದು, ಮನೆಯಿಂದ ನೀರು ಹೊರಹಾಕಲು ಜನ ಪರದಾಡಿದ್ದಾರೆ. ಮಳೆ ನೀರಿಂದ ಮನೆಗಳಲ್ಲಿನ ಬಹುತೇಕ ವಸ್ತುಗಳು ಹಾನಿಗೊಳಗಾಗಿವೆ.

ಇಷ್ಟೇ ಅಲ್ಲದೇ ರಸ್ತೆಗಳ ಮೇಲೂ ನೀರು ಹರಿಯುತ್ತಿದ್ದು ಜನ ಓಡಾಡಲು ತೀವ್ರ ಹರಸಾಹಸ ಪಡುತ್ತಿದ್ದಾರೆ. ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ ತಡೆಗೋಡೆಯಿಂದ ಮಳೆ ನೀರು ಮುಂದೆ ಹೋಗದೆ ಮನೆಗಳಿಗೆ ನುಗ್ಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೂಡಲೇ ತಮ್ಮ ಸಮಸ್ಯೆ ಬಗೆಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad
Ad
Nk Channel Final 21 09 2023