ರಾಯಚೂರು: ಸ್ಟೇರಿಂಗ್ ರಾಡ್ ಕಟ್ ಆಗಿ ಕೆಎಸ್ಆರ್ಟಿಸಿ ಬಸ್ವೊಂದು ಜಮೀನಿಗೆ ನುಗ್ಗಿದ ಘಟನೆ ಮಾನ್ವಿಯ ನಂದಿಹಾಳ ಬಳಿ ನಡೆದಿದೆ.
ಇದರ ಪರಿಣಾಮ ಮೂವರು ಸ್ಥಿತಿ ಗಂಭೀರವಾಗಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಸ್ಟೇರಿಂಗ್ ರಾಡ್ ಕಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮೊದಲು ತಡೆಗೋಡೆಗೆ ಹೋಗಿ ಡಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಮಾನ್ವಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Ad