ಬೆಂಗಳೂರು : ರಾಜ್ಯದಲ್ಲಿ ಇನ್ನು ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಆದರೆ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.
ದಕ್ಷಿಣ ಒಳನಾಡಿನ ಚಿತ್ರದುರ್ಗ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಮಲೆನಾಡಿನ ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಧ್ಯಮ ಮಳೆ
Ad