Ad

ಕರ್ನಾಟಕದಲ್ಲಿ ಜೂನ್​ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು

Rain

ಬೆಂಗಳೂರು: ಕಳೆದ 15 ದಿನಗಳಲ್ಲಿ ರಾಜ್ಯದ 19 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹಿಂದಿನ ವರ್ಷದ ಮುಂಗಾರು ಅವಧಿಯಲ್ಲಿ 233 ತಾಲೂಕುಗಳ ಮೇಲೆ ಆವರಿಸಿದ್ದ ಬರದ ಕಾರ್ಮೋಡ ನಿಧಾನವಾಗಿ ಸರಿಯತೊಡಗಿದೆ. ಈ ಬಾರಿ ಮುಂಗಾರುಪೂರ್ವ ಮಳೆಯೂ ಜೀವ ತುಂಬಿದ್ದು, ಮುಂಗಾರು ಮಳೆಯ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

Ad
300x250 2

ಇನ್ನು ಕರ್ನಾಟಕದಲ್ಲಿ ಜೂನ್ 21ರಿಂದ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Ad
Ad
Nk Channel Final 21 09 2023
Ad