Bengaluru 22°C
Ad

ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಭರ್ಜರಿ ಮಳೆ; ಎಲ್ಲೆಲ್ಲಿ ಇರಲಿದೆ ಜೋರು ಮಳೆ

Rain

ಬೆಂಗಳೂರು: ಇಂದಿನಿಂದ 4 ದಿನಗಳ ಕಾಲ ರಾಜ್ಯದಲ್ಲಿ ಬಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಜೂನ್ 20ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗಂಟೆಯ 40-50‌ ಕಿ.ಲೋ ಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆ ಸೂಚನೆ ಇದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಯಲ್ಲಿ ಮಳೆ ಆಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜೋರು ಮಳೆಯ ಬೀಳುವ ಸಂಭವ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳದಲ್ಲೂ ಮಳೆ ಆಗಲಿದೆ. ಬೆಂಗಳೂರಿನಲ್ಲಿಯೂ ಜೂನ್ 20ರವರೆಗೆ ಸಾಧರಣ ಮಳೆ ಬೀಳುವ ಸಂಭವ ಇದೆ. ಸಂಜೆ ಬಳಿಕ ಬೆಂಗಳೂರಿನಲ್ಲಿ ಎಂದಿನಂತೆ ಮಳೆಯ ಮುನ್ಸೂಚನೆ‌ ಇದೆ. ಕಳೆದ ಎರಡು ದಿನದಿಂದ ನಗರದಲ್ಲಿ ಗಣನೀಯವಾಗಿ ಉಷ್ಣಾಂಶ ಇಳಿಕೆ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad
Ad
Nk Channel Final 21 09 2023
Ad