Bengaluru 22°C
Ad

ಇಂದು ದಕ್ಷಿಣ ಕನ್ನಡ ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಾರುತಗಳು (ಗಂಟೆಗೆ 40-50 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆ ಮತ್ತು ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ (30-40 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಗಳು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇನ್ನು ಮೇ 31ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ (ಗಂಟೆಗೆ 30-40 ಕಿ.ಮೀ) ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

 

Ad
Ad
Nk Channel Final 21 09 2023
Ad