ರಾಮನಗರ: ಕೆ‌ಎಸ್‌ಆರ್‌ಟಿಸಿ‌ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಸವಾರ ಸಾವನ್ನಪ್ಪಿರೋ ಘಟನೆ ಮಾಗಡಿ ತಾಲೂಕಿನ ಮುತ್ತಯನ‌ಕಟ್ಟೆ ಬಳಿ ನಡೆದಿದೆ. ಮಾಗಡಿ ನಿವಾಸಿ ವಸೀಂ (25) ಮೃತ ಬೈಕ್ ಸವಾರ.

ರಾಮನಗರ ಕಡೆಯಿಂದ ಬರುತ್ತಿದ್ದ ವೇಳೆ ಬೈಕ್ ಸವಾರ ಬಸ್‌ಗೆ ಏಕಾಏಕಿ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಬಸ್ ಕೆಳಗೆ ಬೈಕ್ ಸವಾರ ಬಿದ್ದಿದ್ದಾನೆ. ಕೂಡಲೇ ಆತನ ಮೇಲೆ ಬಸ್​ ಹರಿದು ಹೋಗಿದೆ. ಪರಿಣಾಮ ತಲೆಯಿಂದ ಅಧಿಕ ರಕ್ತಸ್ರಾವನ ಉಂಟಾಗಿ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೂಡಲೇ ಘಟನಾ ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡ ಪರಿಶೀಲನೆ ನಡೆಸಿದ್ದಾರೆ. ಮೃತದೇಹದವನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.