ರಾಮನಗರ: ಬಿಡದಿ ಟೌನ್​ಶಿಪ್​​ ವಿಚಾರದಲ್ಲಿ ಗದ್ದಲ – ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು ಒತ್ತುವರಿ ವಿರುದ್ಧ ತಿರುಗಿಬಿದ್ದಿದ್ದಾರೆ. ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ.

ಯಾವುದೇ ಕಾರಣಕ್ಕೂ ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ ರೈತರು ಒತ್ತಾಯಿಸಿದ್ದಾರೆ. ಬಲವಂತವಾಗಿ ಸರ್ವೇ ಕಾರ್ಯ ನಡೆಸಿದ್ರೆ ಅಧಿಕಾರಿಗಳಿಗೆ ಪೊರಕೆ ಏಟು ಕೊಡುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಇದರ ಹೊರತಾಗಿಯೂ ಸರ್ವೆಗೆ ಮುಂದಾದ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆ ಏಟು ಕೊಟ್ಟಿದ್ದಾರೆ.