ರಾಮನಗರ: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದೆ. ಈ ಮಧ್ಯೆ ಚನ್ನಪಟ್ಟಣದ ತಾಲೂಕು ಬಿಜೆಪಿ ಅಧ್ಯಕ್ಷ ಟಿ.ಎಸ್.ರಾಜು ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ. ಯುವತಿಯೊಬ್ಬರು ಅಕ್ಕೂರು ಠಾಣೆಯಲ್ಲಿ ದೂರು ನೀಡಿದ್ದು, 2 ದಿನದ ಹಿಂದೆ ಗಣೇಶ ವಿಸರ್ಜನೆ ವೇಳೆ ರಾಜು ನನ್ನ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದು, ನನ್ನ ಮನೆ ಮುಂದೆಯೇ ನನ್ನ ಫೋಟೋ ತೆಗೆದು ರೇಗಿಸಿ ಕಿರುಕುಳ ನೀಡಿದ್ದಾನೆ ಅಂತ ದೂರು ನೀಡಿದ್ದಾಳೆ.
ಇನ್ನು ಘಟನೆ ಸಂಬಂಧ ಚನ್ನಪಟ್ಟಣದ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಬಿಜೆಪಿ ಎಂಎಲ್ಸಿ ಸಿ.ಪಿ ಯೋಗೇಶ್ವರ್ ಗೆ ಆಪ್ತ ವಲಯದಲ್ಲಿ ಆರೋಪಿ ರಾಜು ಗುರುತಿಸಿಕೊಂಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿ ಚನ್ನಪಟ್ಟಣದ ತೂಬಿನಕೆರೆ ಗ್ರಾಮದ ನಿವಾಸಿಯಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದೂರಿನಲ್ಲಿ ಸಂತ್ರಸ್ತ ಮಹಿಳೆ ಕಾನೂನು ಕ್ರಮವಹಿಸಿ ಎಂದು ಆಗ್ರಹಿಸಿದ್ದಾರೆ.
ಚನ್ನಪಟ್ಟಣ ಬಿಜೆಪಿ ಅಧ್ಯಕ್ಷನ ವಿರುದ್ಧ FIR ಪ್ರಕರಣದ ಸಂಬಂಧ ಟಿ.ಎಸ್.ರಾಜು ಅಮಾನತು ಮಾಡಿ ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಎನ್.ಆನಂದಸ್ವಾಮಿ ಆದೇಶ ಮಾಡಿದ್ದಾರೆ. ಮಹಿಳೆ ಕೇಸ್ ನಲ್ಲಿ FIR ಆಗ್ತಿದ್ದಂತೆ ಸಸ್ಪೆಂಡ್ ಮಾಡಿ ಕ್ರಮ ಕೈಗೊಳ್ಳಲಾಗಿದ್ದು, ಸದ್ಯ ಆರೋಪಿ ರಾಜು ಪೊಲೀಸರಿಗೆ ಸಿಗದೆ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.