ಮಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್, ಕಲಬುರಗಿ, ಬೆಳಗಾವಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ್ ಕಡಲು ಪ್ರಕ್ಷುಬ್ದಗೊಂಡಿರುವನ ಹಿನ್ನಲೆ ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇನ್ನು ಕಚ್ ಕರಾವಳಿ ಮತ್ತು ಪಾಕಿಸ್ತಾನ ಮತ್ತು ಈಶಾನ್ಯ ಅರೇಬಿಯನ್ ಸಮುದ್ರದ ಪಕ್ಕದ ಪ್ರದೇಶಗಳಲ್ಲಿ ಒತ್ತಡವು ಪಶ್ಚಿಮಕ್ಕೆ ಚಲಿಸಿದ್ದು, ಚಂಡಮಾರುತ ‘ಅಸ್ನಾ’ (‘ಅಸ್-ನಾ’ ಎಂದು ಉಚ್ಚರಿಸಲಾಗುತ್ತದೆ) ತೀವ್ರಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.

