Bengaluru 21°C
Ad

ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ದೇಶದ 23 ಲೇಖಕರಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.‌ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ, ಕೃಷ್ಣಮೂರ್ತಿ ಬಿಳಿಗೆರೆ ಅವರಿಗೆ ಬಾಲ ಪುರಸ್ಕಾರ ಘೋಷಣೆ ಮಾಡಲಾಗಿದೆ

ಬೆಂಗಳೂರು:  ದೇಶದ 23 ಲೇಖಕರಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.‌ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ, ಕೃಷ್ಣಮೂರ್ತಿ ಬಿಳಿಗೆರೆ ಅವರಿಗೆ ಬಾಲ ಪುರಸ್ಕಾರ ಘೋಷಣೆ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ.

ಶ್ರುತಿ ಬಿ.ಆರ್.‌ ಅವರು ಚಿಕ್ಕಮಗಳೂರಿನ ತರೀಕೆರೆಯವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಕೆಎಎಸ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕವಯತ್ರಿಯಾಗಿಯೂ ಗುರುತಿಸಿಕೊಂಡಿದ್ದಾರೆ.ಇವರ ಮೊದಲ ಕವನ ಸಂಕಲನವಾದ ‘ಜೀರೋ ಬ್ಯಾಲೆನ್ಸ್’‌ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿಳಿಗೆರೆ ಅವರು ಇದೇ ಜಿಲ್ಲೆಯ ಹುಳಿಯಾರಿನ ಬಿಎಂಎಸ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾವ್ಯ, ಕತೆ, ನಾಟಕಗಳ ರಚನೆ ಮೂಲಕ ಇವರು ನಾಡಿನ ಮನೆಮಾತಾಗಿದ್ದಾರೆ. ಇವರಿಗೆ ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ದೊರೆತಿವೆ.

 

Ad
Ad
Nk Channel Final 21 09 2023
Ad