News Karnataka Kannada
Monday, April 22 2024
Cricket
ಕರ್ನಾಟಕ

ಪಿಯುಸಿ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಗುಡ್​ ನ್ಯೂಸ್​ ನೀಡಿದ ಸಿಎಂ

ಸಿಎಂ ಸಿದ್ದು ಅವರು ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್​ ನಲ್ಲಿ ರಾಜ್ಯದ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಉಚಿತ ವಿದ್ಯುತ್​ ಮತ್ತು ನಿರಂತರ ನೀರಿನ ಸೌಲಭ್ಯಕ್ಕೆ 25 ಕೋಟಿ ರೂ ಹಣ ಮೀಸಲು ಇಟ್ಟಿದ್ದಾರೆ. ಹಾಗೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 20 ಸಾವಿರ ​ವಿದ್ಯಾರ್ಥಿಗಳಿಗೆ ನೀಟ್ ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮತ್ತು ಶಾಲಾ-ಕಾಲೇಜು ಕೊಠಡಿ, ದುರಸ್ತಿ, ಶೌಚಾಲಯ ನಿರ್ಮಾಣಕ್ಕೆ 850 ಕೋಟಿ ರೂಪಾಯಿಯನ್ನು ಮೀಸಲು ಇಡಲಾಗಿದೆ.
Photo Credit : News Kannada

ಬೆಂಗಳೂರು: ಸಿಎಂ ಸಿದ್ದು ಅವರು ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್​ ನಲ್ಲಿ ರಾಜ್ಯದ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಉಚಿತ ವಿದ್ಯುತ್​ ಮತ್ತು ನಿರಂತರ ನೀರಿನ ಸೌಲಭ್ಯಕ್ಕೆ 25 ಕೋಟಿ ರೂ ಹಣ ಮೀಸಲು ಇಟ್ಟಿದ್ದಾರೆ. ಹಾಗೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 20 ಸಾವಿರ ​ವಿದ್ಯಾರ್ಥಿಗಳಿಗೆ ನೀಟ್ ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮತ್ತು ಶಾಲಾ-ಕಾಲೇಜು ಕೊಠಡಿ, ದುರಸ್ತಿ, ಶೌಚಾಲಯ ನಿರ್ಮಾಣಕ್ಕೆ 850 ಕೋಟಿ ರೂಪಾಯಿಯನ್ನು ಮೀಸಲು ಇಡಲಾಗಿದೆ.

ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುತ್ತದೆ.

ಇನ್ನು ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು, ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ ಅಥವಾ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತದೆ.

ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು (UVCE) 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಇದಕ್ಕಾಗಿ ಸರ್ಕಾರದಿಂದ 100 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಜೊತೆಗೆ ಸಿ.ಎಸ್.ಆರ್.‌ ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲಾಗುತ್ತದೆ.

ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು