Bengaluru 28°C
Ad

ಆಗುಂಬೆ ಘಾಟಿಯಲ್ಲಿ ನಾಳೆಯಿಂದ ಭಾರಿ ವಾಹನಗಳ ಸಂಚಾರ ನಿಷೇಧ

Aagumbe Sunset

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಇಂದಿನಿಂದ (ಜೂ.27) ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಜೂ.27ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಬದಲಿ ಮಾರ್ಗ ಸೂಚಿಸಿ ಶಿವಮೊಗ್ಗ ಡಿಸಿ ಆದೇಶ ಹೊರಡಿಸಿದ್ದಾರೆ. ಬದಲಿ ಮಾರ್ಗವನ್ನು ಗುರುತಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ನೀಡಿದ್ದಾರೆ.

ಜಿಲ್ಲೆ ಸೇರಿದಂತೆ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಲಾಗಿದೆ. ತೀರ್ಥಹಳ್ಳಿ-ಮಾಸ್ತಿಕಟ್ಟೆ, ಸಿದ್ದಾಪುರ-ಕುಂದಾಪುರ ಉಡುಪಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ.

Ad
Ad
Nk Channel Final 21 09 2023
Ad