Bengaluru 22°C
Ad

ಬೆಳ್ಳುಳ್ಳಿ ದರ ಏರಿಕೆ: ಶಿವಮೊಗ್ಗದಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿ ಮಾರಾಟ

ಬೆಳ್ಳುಳ್ಳಿ ದರ 300 ರಿಂದ 350 ರೂ. ತಲುಪಿದ್ದು, ಬೆಳ್ಳುಳ್ಳಿ ದರ ಜಾಸ್ತಿ ಆಗಿರುವುದನ್ನು ಗಮನಿಸಿದ ಕೆಲ ಬೆಳ್ಳುಳ್ಳಿ ಸಗಟು ವ್ಯಾಪಾರಸ್ಥರು ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಕಡಿಮೆ ದರದಲ್ಲಿ ಮಾರುಕಟ್ಟೆಗೆ ಬಿಟ್ಟು ಮಾರಾಟ ಮಾಡುತ್ತಿದ್ದಾರೆ.

ಶಿವಮೊಗ್ಗ: ಬೆಳ್ಳುಳ್ಳಿ ದರ 300 ರಿಂದ 350 ರೂ. ತಲುಪಿದ್ದು, ಬೆಳ್ಳುಳ್ಳಿ ದರ ಜಾಸ್ತಿ ಆಗಿರುವುದನ್ನು ಗಮನಿಸಿದ ಕೆಲ ಬೆಳ್ಳುಳ್ಳಿ ಸಗಟು ವ್ಯಾಪಾರಸ್ಥರು ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಕಡಿಮೆ ದರದಲ್ಲಿ ಮಾರುಕಟ್ಟೆಗೆ ಬಿಟ್ಟು ಮಾರಾಟ ಮಾಡುತ್ತಿದ್ದಾರೆ.

ಈಗಾಗಲೇ ಸರಕಾರವು ಚೀನಾ ದೇಶ ಮತ್ತು ರಾಜ್ಯದಲ್ಲಿ ಚೀನಾ ಬೆಳ್ಳುಳ್ಳಿ ಬಳಕೆಗೆ ನಿಷೇಧ ಹೇರಿದೆ. ಚೀನಾದಲ್ಲಿ ಬೆಳ್ಳುಳ್ಳಿಗೆ ದೊಡ್ಡ ಪ್ರಮಾಣದಲ್ಲಿ ರಾಸಾಯನಿಕ ಬಳಕೆ ಮಾಡುತ್ತಾರೆ. ಬೆಳ್ಳುಳ್ಳಿ ಸಂಸ್ಕರಣೆಗೂ ಬಳಷ್ಟು ರಾಸಾಯನಿಕ ಉಪಯೋಗಿಸುತ್ತಾರೆ. ಅವುಗಳ ಸೇವನೆಯಿಂದ ಹೊಟ್ಟೆ ಹುಣ್ಣು, ಸೋಂಕು ಇತ್ಯಾದಿ ಸಮಸ್ಯೆಗಳೂ ಸೃಷ್ಟಿಯಾಗುತ್ತವೆ.

ಮೂತ್ರಪಿಂಡಗಳ ಆರೋಗ್ಯದ ಮೇಲೂ ಚೀನಾ ಬೆಳ್ಳುಳ್ಳಿ ಅಡ್ಡ ಪರಿಣಾಮ ಬೀರುತ್ತದೆ. ಈ ಹಿನ್ನಲೆಯಲ್ಲಿ 10 ವರ್ಷಗಳ ಹಿಂದೆಯೇ ಚೀನಾ ಬೆಳ್ಳುಳ್ಳಿ ನಿಷೇಧಿಸಲಾಗಿದೆ. ನೇಪಾಳ, ಮ್ಯಾನ್ಮಾರ್, ಭೂತಾನ್ ಕಳ್ಳ ಮಾರ್ಗವಾಗಿ ದೇಶ ಮತ್ತು ರಾಜ್ಯಕ್ಕೆ ಚೀನಾ ಬೆಳ್ಳುಳ್ಳಿ ಎಂಟ್ರಿಕೊಡುತ್ತಿದೆ. ಸದ್ಯ ಆರೋಗ್ಯಕ್ಕೆ ಹಾನಿಕಾರವಾಗಿರುವ ಚೀನಾ ಬೆಳ್ಳುಳ್ಳಿ ಶಿವಮೊಗ್ಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.

ಕದ್ದು ಮುಚ್ಚಿ ಚೀನಾ ಬೆಳ್ಳುಳ್ಳಿ ಮಾರಾಟ ನಡೆಯುತ್ತಿದೆ. ಈಗಾಗಲೇ ಹೊಟೇಲ್​ಗಳಲ್ಲಿ ಈ ಚೀನಾ ಬೆಳ್ಳುಳ್ಳಿ ಬಳಕೆ ಆಗುತ್ತಿದೆ. ಇದರಿಂದ ಆಹಾರ ಸೇವನೆ ಮಾಡಿದ ಗ್ರಾಹಕರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಹಿನ್ನಲೆಯಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರಿಗಳ ಅಧಿಕಾರಿಗಳು ಈ ನಿಷೇಧಿತ ಚೀನಾ ಬೆಳ್ಳುಳ್ಳಿ ಅಕ್ರಮ ಮಾರಾಟ ದಂಧೆಗೆ ಕಡಿವಾಣ ಹಾಕಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Ad
Ad
Nk Channel Final 21 09 2023