Bengaluru 21°C
Ad

ಮದ್ವೆಯಾಗುವುದಾಗಿ ನಂಬಿಸಿ ವಂಚನೆ : ಬಿಜೆಪಿ ಮುಖಂಡ ಅರುಣ್ ಕುಗ್ವೆ ಬಂಧನ

ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ ದೈಹಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ ಬೆದರಿಕೆಯನ್ನೂ ಒಡ್ಡಿರುವ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಎಂಬಾತನನ್ನು ಪೊಲೀಸರು ಭಾನುವಾರ ಬೆಳಗ್ಗೆ ಬಂಧಿಸಿದ್ದಾರೆ.

ಸಾಗರ: ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ ದೈಹಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ ಬೆದರಿಕೆಯನ್ನೂ ಒಡ್ಡಿರುವ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಎಂಬಾತನನ್ನು ಪೊಲೀಸರು ಭಾನುವಾರ ಬೆಳಗ್ಗೆ ಬಂಧಿಸಿದ್ದಾರೆ.

ಯುವತಿಯು ಶಿವಮೊಗ್ಗ ನಗರದ ಮಹಿಳಾ ಠಾಣೆಯಲ್ಲಿ ದಾಖಲಿಸಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಅರುಣ್ ಕುಗ್ವೆಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾಲೇಜಿನಿಂದಲೆ ಪರಿಚಯವಾಗಿತ್ತು, ಸ್ನೇಹ ಸ್ನೇಹ ಪ್ರೀತಿಗೆ ತಿರುಗಿ ಒಂದೇ ಸಮುದಾಯದವರಾದ ಹಿನ್ನೆಲೆಯಲ್ಲಿ ಎರಡೂ ಮನೆಗಳಿಗೆ ಸಂಬಂಧ ಒಪ್ಪಿಗೆಯಾಗಿದೆ.ಉದ್ಯಮಿ ಮತ್ತು ರಾಜಕಾರಣಿ ಎಂದು ಹೇಳಿಕೊಂಡಿದ್ದ ಅರುಣ್ ಮುಂದೆ ವಿವಾಹವಾಗುವ ಹುಸಿ ಭರವಸೆ ನೀಡಿ ಜೋಗ, ಸಾಗರ, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ತನ್ನೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಬಲಾತ್ಕಾರವಾಗಿ ವಿಡಿಯೋ ಚಿತ್ರೀಕರಣ, ಫೋಟೋ ತೆಗೆದುಕೊಂಡಿದ್ದಾನೆ ಎಂದು ಮೂಲತಃ ಸಾಗರದವರಾದ ಯುವತಿ ದೂರಿನಲ್ಲಿ ವಿವರಿಸಿದ್ದಾರೆ.

ಅಲ್ಲದೇ, ಬೇರೊಬ್ಬ ಯುವತಿಯೊಂದಿಗೆ ಮದುವೆ ನಿಶ್ಚಯ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದಕ್ಕೆ ಆತ ಹಾಗೂ ಆತನ ಸೋದರ ಗಣೇಶ್ ನನಗೆ ಮತ್ತು ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಯುವತಿ ದೂರಿದ್ದಾರೆ.

Ad
Ad
Nk Channel Final 21 09 2023
Ad