ಶಿವಮೊಗ್ಗ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಗಿಗುಡ್ಡದ ಆಸೀಫ್ ಖಾನ್ (33 ) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಎ.12 ರಂದು ಎನ್ ಟಿ ರಸ್ತೆಯಲ್ಲಿನ ಹೋಟೆಲ್ ವೊಂದರ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆ ಪಿಐ ಮತ್ತು ಪಿಎಸ್ಐ ಹಾಗೂ ಸಿಬ್ಬಂಧಿಗಳ ತಂಡವು ದಾಳಿ ನಡೆಸಿ ಆಸೀಫ್ ಖಾನ್ ನನ್ನು ಬಂಧಿಸಿದ್ದಾರೆ.
ಬಂಧಿತನಿಂದ ಅಂದಾಜು 70,000 ರೂ. ಮೌಲ್ಯದ 1ಕೆಜಿ 400 ಗ್ರಾಂ ತೂಕದ ಗಾಂಜಾವನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 80,000 ರೂ ಮೌಲ್ಯದ ಆಟೋವನ್ನು ವಶಪಡಿಸಿಕೊಂಡಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

