ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ ಜಿಲ್ಲೆಯ ಹೊಸನಗರ ತಾಲೂಕಿನ ಸುರುಳಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಸದಾನಂದ ಭಟ್ ಆತ್ಮಹತ್ಯೆ ಮಾಡಿಕೊಂಡ ಪತಿ. ಹಲ್ಲೆಗೊಳಗಾದ ಪತ್ನಿ ಸಬೀತಾಗೆ ರಿಪ್ಪನ್ ಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಪಟಗುಪ್ಪ ಸೇತುವೆ ಮೇಲಿಂದ ಸದಾನಂದ ಭಟ್ ಹಾರಿದ್ದರು. ಇಂದು ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಈ ಕುರಿತು ರಿಪ್ಪನ್ ಪೇಟೆ ಹಾಗೂ ಹೊಸನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
Ad